ಅರಣ್ಯಾಧಿಕಾರಿ ಖುದ್ದು ಹಾಜರಿಗೆ ಆದೇಶ ಹೊರಡಿಸಿದ ಹೈಕೋರ್ಟ್

geetha

ಗುರುವಾರ, 22 ಫೆಬ್ರವರಿ 2024 (18:00 IST)
ಬೆಂಗಳೂರು-ಅರಣ್ಯ ಒತ್ತುವರಿ ಆರೋಪದಡಿ ಸಾಗುವಳಿ ಚೀಟಿ ಹೊಂದಿದ ರೈತರ ಮಾವಿನ ತೋಪುಗಳನ್ನು ತೆರವುಗೊಳಿಸಿದ ಆರೋಪಕ್ಕೆ ಗುರಿಯಾಗಿರುವ ಅರಣ್ಯಾಧಿಕಾರಿಗಳ ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.ಈ ಸಂಬಂಧ ಉಪ್ಪಾರಪಲ್ಲಿಯ ಗುಲ್ಜಾರ್‌ ಪಾಷ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
 
ಇದಕ್ಕೆ ನ್ಯಾಯಪೀಠ, 'ಅರಣ್ಯ ಭೂಮಿ ಒತ್ತುವರಿಯಾಗಿದ್ದರೆ, ಅದನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಬೇಕಿತ್ತು. ಅದು ಬಿಟ್ಟು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿರುವ ಸಂದರ್ಭದಲ್ಲಿ ಅನುಮತಿ ಪಡೆಯದೇ ಸಾವಿರಾರು ಮರಗಳನ್ನು ಏಕೆ ಕತ್ತರಿಸಲಾಗಿದೆ? ಎಂದು ಖಾರವಾಗಿ ಪ್ರಶ್ನಿಸಿತಲ್ಲದೆ, ಪ್ರಕರಣದ ಪ್ರತಿವಾದಿಗಳಾದ ಕೋಲಾರ ಜಿಲ್ಲೆ ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲ ಮತ್ತು ವಲಯ ಅರಣ್ಯಾಧಿಕಾರಿ ಖುದ್ದು ಹಾಜರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ