ಬೆಂಗಳೂರು : ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕವಾಗಿ ರಸ್ತೆಯಲ್ಲೇ ಹಲ್ಲೆ ನಡೆಸಿರುವ ಘಟನೆ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ನೈಗರ್ (28) ಹಲ್ಲೆಗೊಳಗಾದ ಯುವತಿಯಾಗಿದ್ದು, ಆರೋಪಿ ಶೇಕ್ ಮುಜೀಬ್ ನನ್ನು ಸ್ಥಳೀಯ ರು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರು ವರ್ಷದ ಹಿಂದೆ ಮದುವೆಯಾಗಿದ್ದ ಈ ಜೋಡಿ ಬಳಿಕ ಬೇರೆಯಾಗಿ ಪ್ರತ್ಯೇಕವಾಗಿ ವಾಸವಾಗಿದ್ದರು.
ಈ ನಡುವೆ ನೈಗರ್ ಸಲೀಂ ಎಂಬಾತನೊಡನೆ ಆಪ್ತತೆ ಬೆಳೆಸಿಕೊಂಡಿದ್ದಳು. ಇದರಿಂದ ಕುಪಿತಗೊಂಡ ಶೇಕ್ ಮುಜೀಬ್ ನೈಗರ್ ಬಳಿ ತೆರಳಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ನೈಗರ್ ನನ್ನು ಎಚ್ಎಎಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯ ವಿರುದ್ದ ಕೊಲೆಯತ್ನ ಪ್ರಕರಣ ದಾಖಲಿಸಲಾಗಿದೆ.