ಪ್ರೀತಿಸಿ, ಕೈ ಹಿಡಿದ ಪತ್ನಿಯನ್ನೇ ಮನಸೋ ಇಚ್ಛೇ ಚಾಕುವಿನಿಂದ ಇರಿದು ಹತ್ಯೆಗೈದ ಪತಿ

Sampriya

ಬುಧವಾರ, 28 ಮೇ 2025 (16:16 IST)
ಚಿಕ್ಕಮಗಳೂರು: ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೊಬ್ಬ ಮನಸೋ ಇಚ್ಛೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ   ಪ್ರೀತಿಸಿ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ.

ಮೃತ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದೆ. ಆಕೆಯ ಪತಿ ಅವಿನಾಶ್ (32) ಹತ್ಯೆಗೈದ ಆರೋಪಿಯಾಗಿದ್ದಾನೆ. ಇಬ್ಬರ ನಡುವೆ ಜಗಳವಾಗಿದೆ. ಇದೇ ಕಾರಣಕ್ಕೆ ಆರೋಪಿ ಮನಸ್ಸೋ ಇಚ್ಛೇ ಚಾಕು ಚುಚ್ಚಿ ಕೊಲೆಗೈದಿದ್ದಾನೆ.

ದಂಪತಿಗೆ ಎರಡೂವರೆ ವರ್ಷದ ಹೆಣ್ಣು ಮಗುವಿದೆ. ಕಳೆದ ವಾರ ಇಬ್ಬರೂ, ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಇಬ್ಬರೂ ಖುಷಿಯಾಗಿಯೇ ಇದ್ದರು. ಆದರೆ, ಅವಿನಾಶ್ ಆಕೆಗೆ ಡಿವೋರ್ಸ್ ನೀಡು ಎಂದು ಕಿರುಕುಳ ನೀಡುತ್ತಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.

ಹತ್ಯೆ ಸಂಬಂಧ ಪ್ರಕರಣ ದಾಖಲಾಗಿದ್ದು, ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ