ಗಾಂಧಿ ಜಯಂತಿ ದಿನವೇ ಉದ್ಘಾಟನೆ ಎಂದ ಸಚಿವ
ಗಾಂಧಿ ಜಯಂತಿಯಂದು ಉದ್ಘಾಟನೆ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಹೇಳಿದ್ದಾರೆ.
ಅಗತ್ಯವಾದ ಎಲ್ಲಾ ಕಾಮಗಾರಿ ಪೂರ್ಣಗೊಳಿಸಿ ಉಪಕರಣಗಳನ್ನು ತರಿಸುವ ಪ್ರಕ್ರಿಯೆ ಪೂರ್ಣ ಗೊಳಿಸಬೇಕು. ಅಗತ್ಯವಿರುವ ಸಿಬ್ಬಂದಿ ವಿವರಗಳನ್ನು ನಿರ್ದೇಶಕರಿಗೆ ಕಳುಹಿಸಿ ಒಪ್ಪಿಗೆ ಪಡೆದು ತ್ವರಿತವಾಗಿ ಟ್ರಾಮಾ ಸೆಂಟರ್ ಕಾರ್ಯಾರಂಭಿಸುವಂತೆ ನೋಡಿಕೊಳ್ಳಬೇಕು. ಬರುವ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ಅದನ್ನು ಉದ್ಘಾಟಿಸಲು ಸಿದ್ಧತೆ ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚಿಸಿದರು.
ಖಾಲಿಯಿರುವ 16 ಪ್ರೊಫೆಸರ್ ಹುದ್ದೆಗಳ ಭರ್ತಿಗೆ ತಕ್ಷಣವೇ ಅಧಿಸೂಚನೆ ಹೊರಡಿಸಿ ನೇಮಕ ಪ್ರಕ್ರಿಯೆ ಮುಗಿಸುವಂತೆ ಸೂಚಿಸಿದರು.