ಗುರುವಾರ ರಾತ್ರಿ ಮೇಖ್ರಿ ಸರ್ಕಲ್ ಬಳಿ ಆಟೋ ಇಳಿದು ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ವೆಂಕಟೇಶ್ ಗೆ ವೇಗವಾಗಿ ಬಂದ ಬೆಂಜ್ ಕಾರು ಢಿಕ್ಕಿಯಾಗಿತ್ತು, ಅಪಘಾತವಾದ ಕೂಡಲೇ ಸ್ಥಳಿಯರ ನೆರವಿನಿಂದ ಅಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೆಂಕಟೇಶ್ ಮೃತಪಟ್ಟಿದ್ದರು. ಪ್ರತ್ಯಕ್ಷದರ್ಶಿಗಳು ಮಾಹಿತಿಯನ್ವಯ ಸಿಸಿ ಕ್ಯಾಮೆರಾದ ದೃಶ್ಯಾವಳಿಗಳನ್ನ ಪರಿಶೀಲಿಸಿರುವ ಸದಾಶಿವನಗರ ಸಂಚಾರ ಠಾಣಾ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.