ಇಸ್ತ್ರಿ ಪೆಟ್ಟಿಗೆಯಲ್ಲಿ ಸಿಕ್ಕಿತು ಕೋಟಿ ಕೋಟಿ ಮೌಲ್ಯದ ಚಿನ್ನ

ಸೋಮವಾರ, 12 ಆಗಸ್ಟ್ 2019 (15:47 IST)
ಕೋಟಿ ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಿಸುತ್ತಿದ್ದಾಗ ಕೊನೆಗೂ ಕಳ್ಳ ಸಿಕ್ಕಿ ಬಿದ್ದಿದ್ದಾನೆ.

ಇಸ್ತ್ರಿ ಮಾಡುವ ಪೆಟ್ಟಿಗೆಗಳಲ್ಲಿ 3.45 ಕೋಟಿ ಮೌಲ್ಯದ ಚಿನ್ನದ ಬಿಸ್ಕಟ್ ಗಳನ್ನು ಸಾಗಿಸಲಾಗುತ್ತಿತ್ತು. ಆರೋಪಿಯನ್ನ ಬಂಧನ ಮಾಡಲಾಗಿದೆ.

ಹೈದರಾಬಾದ್ ನ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.  9.20 ಕೆಜಿ ಚಿನ್ನದ ಬಿಸ್ಕಟ್ ಗಳನ್ನು ಅಬಕಾರಿ ಇಲಾಖೆಯ ಗುಪ್ತಚರ ವಿಭಾಗದ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಚಿನ್ನದ ಬಾರ್ ಗಳನ್ನು ಇಸ್ತ್ರಿ ಪೆಟ್ಟಿಗೆಗಳಲ್ಲಿ ಚಾಲಾಕಿ ಚೋರ ಸಾಗಿಸುತ್ತಿದ್ದನು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ