ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಎರಂಡಕಿಯೂ ದಾಟಲ್ಲ- ಸದಾನಂದಗೌಡ

ಮಂಗಳವಾರ, 16 ಜನವರಿ 2018 (09:09 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಎರಡಂಕಿ ದಾಟುವುದು ಕೂಡ ಅನುಮಾನವಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಸೋಮವಾರಪೇಟೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಕಿಂಗಮೇಕರ್ ಆಗುವುದು ಇರಲಿ, ಎರಡಂಕಿಯನ್ನು ಕೂಡ ದಾಟುವುದು ಅನುಮಾನವಿದೆ. ಜೆಡಿಎಸ್ ಈ ಚುನಾವಣೆ ಕೊನೆಯ ಚುನಾವಣೆ ಆಗಲಿದೆ ಎಂದಿದ್ದಾರೆ.

ರಾಜ್ಯದ ರಾಜಕೀಯದಲ್ಲಿ ಧ್ರುವೀಕರಣವಾಗಲಿದ್ದು, ಬಿಜೆಪಿ 150 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ