ಕಂಬಳ ಆಚರಣೆ ಮುಂದುವರಿಕೆ: ಅಧಿವೇಶನದಲ್ಲಿ ಮಸೂದೆ ಮಂಡನೆ
ಬೆಂಗಳೂರು: ಕರಾವಳಿ ಜಾನಪದ ಕ್ರೀಡೆ ಕಂಬಳ ನಿಷೇಧ ತೆರವು ಕುರಿತ ಆದೇಶಕ್ಕೆ ರಾಷ್ಟ್ರಪತಿ ಅಂಕಿತ ದೊರೆತಿದೆ. ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಸಹ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಕಂಬಳ ಆಚರಣೆಗೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧ್ಯಾದೇಶಕ್ಕೆ ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ. ಇದಕ್ಕೆ ಪೂರಕ ಕಾನೂನು ತಿದ್ದುಪಡಿಗೆ ಮಸೂದೆ ಮಂಡನೆ ಮಾಡಲಾಗುತ್ತಿದೆ. ನವೆಂಬರ್ ನಿಂದ ಕಂಬಳ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಪಶುಸಂಗೋಪನಾ ಇಲಾಖೆ ಮೂಲಕ ಅಧಿಸೂಚನೆ ಹೊರಡಿಸಲು ಸೂಚನೆ ನೀಡಲಾಗಿದೆ ಎಂದರು.