ರೌಡಿ ಶೀಟರ್ ಗಳ ನಿದ್ದೆಗೆಡಿಸಿದ ಖಾಕಿ ಪಡೆ
ರೌಡಿ ಶೀಟರ್ ಗಳನ್ನು ಮಟ್ಟ ಹಾಕಲು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಪೊಲೀಸರು ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಒಟ್ಟು 41 ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ 6 ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ಆಯುಕ್ತ ಆರ್.ದಿಲೀಪ್ ಮಾರ್ಗದರ್ಶನದಲ್ಲಿ ಅಧಿಕಾರಿಗಳು ನಗರದಲ್ಲಿ ಒಟ್ಟು 34 ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ 5 ಪ್ರಕರಣಗಳನ್ನು ದಾಖಲಿಸಿದ್ದಾರೆ. ಅದೇ ರೀತಿ ಧಾರವಾಡದಲ್ಲಿ ಒಟ್ಟು 7 ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ಮಾಡಿ ಮುಂಜಾಗ್ರತಾ ಕ್ರಮವಾಗಿ ಒಂದು ಪ್ರಕರಣ ದಾಖಲು ಮಾಡಿದ್ದಾರೆ. ಇನ್ನೂ ರೌಡಿಗಳ ಮನೆಗಳ ಶೋಧ ಕಾರ್ಯಚರಣೆ ಮುಂದುವರಿಸಿದ್ದಾರೆ.