ಅಡಿಕೆ ಆಮದಿಗೆ ಮುಂದಾದ ಕೇಂದ್ರ
ನಗರದ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರ ಸರ್ಕಾರ ಭೂತಾನ್ ದೇಶದಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. ಇದಕ್ಕೆ ಆಮದು ಸುಂಕ ವಿನಾಯ್ತಿ ನೀಡಲಾಗಿದೆ.
ಈ ಅಡಿಕೆ ನಮ್ಮ ದೇಶಕ್ಕೆ ಬರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಅಡಿಕೆ ಕಾರ್ಯಪಡೆ ಅಧ್ಯಕ್ಷ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.