84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಾಲಯ ಉದ್ಘಾಟನೆ
84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಾಲಯವನ್ನು ಕೇಂದ್ರ ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ ಉದ್ಘಾಟನೆ ಮಾಡಿದ್ದಾರೆ.
ಧಾರವಾಡ ನಗರದಲ್ಲಿ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ಸಾಹಿತ್ಯ ಭವನದಲ್ಲಿ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯ ಉದ್ಘಾಟಿಸಿದರು. ಬಳಿಕ ವಿವಿಧ ಉಪಸಮಿತಿಗಳ ಕಾರ್ಯಾಧ್ಯಕ್ಷರು, ಕಾರ್ಯದರ್ಶಿಗಳ ಸಭೆ ನಡೆಸಿದರು.
ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಕಾರ್ಯಾಧ್ಯಕ್ಷರು, ಕಾರ್ಯದರ್ಶಿಗಳು ಸಮ್ಮೇಳನದ ಪೂರ್ವ ಸಿದ್ಧತೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಿದರು.