ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ!

ಭಾನುವಾರ, 16 ಅಕ್ಟೋಬರ್ 2022 (11:19 IST)
ಜೈಪುರ : 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅಮಾನುಷವಾಗಿ ಕೊಲೆ ಮಾಡಿದ್ದ ವ್ಯಕ್ತಿಗೆ ರಾಜಸ್ಥಾನದ ಪಾಲಿ ಜಿಲ್ಲೆಯ ನ್ಯಾಯಾಲಯ ಮರಣದಂಡನೆ ವಿಧಿಸಿದೆ.

ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಸುರೇಂದ್ರ ಉಮಾರ್ ಈ ತೀರ್ಪನ್ನು ನೀಡಿದ್ದಾರೆ. ಅತ್ಯಾಚಾರಿ ನರ್ಪತ್ ಸಿಂಗ್(22)ಗೆ ಮರಣದಂಡನೆ ಜೊತೆಗೆ 1 ಲಕ್ಷ ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ.

ಜನವರಿಯಲ್ಲಿ ನರ್ಪತ್ ಸಿಂಗ್ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಕತ್ತು ಹಿಸುಕಿ, ಕೋಲಿನಿಂದ ಹೊಡೆದು ಕೊಂದಿದ್ದ. ಇದಾದ ಬಳಿಕ ಆಕೆಯ ಮೃತ ದೇಹವು ಬಾವಿಯಲ್ಲಿ ಪತ್ತೆಯಾಗಿದೆ.

ಈ ಸಂಬಂಧ ಫೆಬ್ರವರಿಯಲ್ಲಿ ಆತನ ವಿರುದ್ಧ ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು. ಇದೀಗ ಪೋಕ್ಸೋ ಕಾಯ್ದೆಯಡಿಯಲ್ಲಿ ನ್ಯಾಯಾಲಯವು ನರ್ಪತ್ ಸಿಂಗ್ನನ್ನು ಅಪರಾಧಿ ಎಂದು ಘೋಷಿಸಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ