ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ದೂರು ನೀಡಿದ್ದರು. ವಿಸ್ಮಯ ಸಿನಿಮಾದ ಚಿತ್ರೀಕರಣ ವೇಳೆ ಅರ್ಜುನ್ ಸರ್ಜಾ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು 2018ರಲ್ಲಿ ಶ್ರುತಿ ಹರಿಹರನ್ ಆರೋಪಿಸಿದ್ದರು. ಬಳಿಕ ತನಿಖೆ ಕೈಗೆತ್ತಿಕೊಂಡ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಸ್ಮಯ ಚಿತ್ರದ ನಿರ್ದೇಶಕ, ನಿರ್ಮಾಪಕ, ಛಾಯಾಗ್ರಾಹಕರನ್ನು ಸಾಕ್ಷಿಯಾಗಿ ಹೇಳಿಕೆ ಪಡೆಯಲಾಗಿತ್ತು. ಆದರೆ, ಅರ್ಜುನ್ ಸರ್ಜಾ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಿಗಳು ಸಿಕ್ಕಿರಲಿಲ್ಲ. ಪೂರಕ ಸಾಕ್ಷಿ ಒದಗಿಸುವಲ್ಲಿ ಸ್ವತಃ ಶ್ರುತಿ ಹರಿಹರನ್ ಸಹ ವಿಫಲರಾಗಿದ್ದರು.