ಮಲೆನಾಡಿನಲ್ಲಿ ಗಜಪಡೆಗಳ ಹಾವಳಿ: ತಡೆಗೆ ಸಚಿವ ಈಶ್ವರ ಖಂಡ್ರೆ ಮಹತ್ವದ ನಿರ್ಧಾರ

Sampriya

ಶುಕ್ರವಾರ, 4 ಅಕ್ಟೋಬರ್ 2024 (19:31 IST)
Photo Courtesy X
ಶಿವಮೊಗ್ಗ: ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ 2 ಸಾವಿರ ಹೆಕ್ಟೇರ್​ನಲ್ಲಿ ಆನೆ ಶಿಬಿರ ಸ್ಥಾಪಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದ ಶಂಕರಘಟ್ಟದಲ್ಲಿ ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವದಲ್ಲಿ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದೆ. ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ರೈತರ ಬೆಳೆ ಹಾನಿ ಸಂಭವಿಸುತ್ತಿದ್ದು, ಜನರ ಸಂಕಷ್ಟದಲ್ಲಿದ್ದಾರೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.


ಇನ್ನೂ ಆನೆಗಳಿಗೆ ಇಷ್ಟವಾಗುವಂತೆ ಬಿದಿರು, ಹಲಸು, ಹುಲ್ಲು ಇತ್ಯಾದಿ ಬೆಳೆಸಲಾಗುವುದು. ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೆರೆ ಹಿಡಿದ ಆನೆಗಳನ್ನು ಇಲ್ಲಿ ತಂದು ಬಿಡಲಾಗುವುದು. ಇದರಿಂದ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಿನ ಹೊರಗೆ ಇರುವ ಆನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಸಾಧ್ಯವಾಗುತ್ತದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ