ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಮಂಗಳವಾರ, 4 ಏಪ್ರಿಲ್ 2023 (20:50 IST)
ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹವಾಮಾನ  ಇಲಾಖೆ ಅಲರ್ಟ್ ಘೋಷಿಸಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಇನ್ನೂ ಎರಡು ದಿನ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಯಿಂದ ತಿಳಿದು ಬಂದಿದೆ . ಬೆಂಗಳೂರು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ