ಖಾಸಗಿ ಆಸ್ಪತ್ರೆಯವರು ಅದನ್ನು ತೆರೆಯಲಿ ಎಂದ ಸಚಿವ

ಮಂಗಳವಾರ, 14 ಏಪ್ರಿಲ್ 2020 (16:48 IST)
ಕೆಲವು ಖಾಸಗಿ ಆಸ್ಪತ್ರೆಗಳು ಮುಚ್ಚಿರುವ ಅವನ್ನು ತೆರೆಯಬೇಕು ಎಂದು ಸಚಿವರೊಬ್ಬರು ಹೇಳಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ಔಷಧಗಳ ದಾಸ್ತಾನು ಇದೆ. ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.

ಕೊರೊನಾ ವೈರಸ್ ಭೀತಿಯಿಂದ ಜಿಲ್ಲೆಯಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ಬಾಗಿಲು ಮುಚ್ಚಿದೆ. ಹೀಗಾಗಿ ಸಾರ್ವಜನಿಕರು ಸಣ್ಣಪುಟ್ಟ ಖಾಯಿಲೆಗೂ ಸರ್ಕಾರಿ ಆಸ್ಪತ್ರೆಗೆ ಬರಲಾರಂಭಿಸಿದ್ದಾರೆ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಸಂದಣಿ ಹೆಚ್ಚುತ್ತಿದ್ದು,  ಅಲ್ಲಿನ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಆದ್ದರಿಂದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಕೂಡಲೇ ಬಾಗಿಲು ತೆರೆದು ಅಗತ್ಯವಿದ್ದವರಿಗೆ ವೈದ್ಯಕೀಯ ಸೇವೆ ನೀಡಲು ಮುಂದಾಗಬೇಕೆಂದು ಸಚಿವ ಹೆಬ್ಬಾರ್ ಮನವಿ ಮಾಡಿದ್ದಾರೆ.

ಕೊರೊನಾ ವೈರಸ್ ಪೀಡಿತರು ಅಥವಾ ಶಂಕಿತರು  ಆಸ್ಪತ್ರೆಗೆ ಬಂದರೆ ಹೇಗೆಂಬ ಚಿಂತೆ ಬೇಡ. ಆಸ್ಪತ್ರೆಗೆ ಬಂದಂಥ ರೋಗಿಗಳಲ್ಲಿ ಕೊರೊನಾ ವೈರಸ್ ನ ಯಾವುದೇ ಲಕ್ಷಣಗಳೂ ಕಂಡು ಬಂದರೂ  ಕೂಡಲೇ ಸರ್ಕಾರಿ ಆಸ್ಪತ್ರೆಗಳಿಗೆ ಕಳುಹಿಸಬೇಕು ಎಂದರು.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ