ವೈದ್ಯರ ಕೊರತೆ ನೀಗಿಸಲು ಅಗತ್ಯ ಕ್ರಮ ಎಂದ ಸಚಿವ

ಶುಕ್ರವಾರ, 14 ಡಿಸೆಂಬರ್ 2018 (14:41 IST)
ರೋಗಿಗಳಿಗೆ ಅನಾನುಕೂಲವಾಗುವುದನ್ನು ತಡೆಯಲು ಹಾಗೂ ಖಾಲಿ ಇರುವ ವೈದ್ಯರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ಹೇಳಿದ್ದಾರೆ.

  ರಾಜ್ಯದಲ್ಲಿ ಖಾಲಿ ಇರುವ ವೈದ್ಯರು ಹಾಗೂ ತಜ್ಞ ವೈದ್ಯರ ಕೊರತೆಯನ್ನು ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಎಸ್. ಪಾಟೀಲ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಅಮರೇಗೌಡ ಬೈಯಾಪುರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರೋಗ್ಯ ಇಲಾಖೆಯಲ್ಲಿ 1136 ತಜ್ಞ ವೈದ್ಯರು ಮತ್ತು 134 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇವೆ. ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಹುದ್ದೆಗಳನ್ನು ಭರ್ತಿ ಮಾಡುವವರೆಗೂ ತಾತ್ಕಾಲಿಕವಾಗಿ ವೈದ್ಯರ ನೇಮಕಾತಿಗೂ ಅವಕಾಶ ಮಾಡಿಕೊಡಲಾಗಿದೆ. ರಾಜ್ಯದ ಯಾವುದೇ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆಯಾಗದಂತೆ ಗಮನ ಹರಿಸಿರುವುದಾಗಿಯೂ ಅವರು ಹೇಳಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ