ಕೃಷಿಯೊಂದಿಗೆ ಅರಣ್ಯ ಬೆಳೆಸಿ, ಹಸಿರು ಕರ್ನಾಟಕಕ್ಕೆ ಸಹಕರಿಸಿ ಎಂದ ಸಚಿವ

ಮಂಗಳವಾರ, 16 ಅಕ್ಟೋಬರ್ 2018 (19:38 IST)
ರಾಜ್ಯದಲ್ಲಿ ಅರಣ್ಯ ಪ್ರದೇಶವನ್ನು ವಿಸ್ತರಿಸುವ ಮೂಲಕ ಹಸಿರು ಕರ್ನಾಟಕ ಮಾಡಲು ರಾಜ್ಯ ಸರ್ಕಾರ ಪಣ ತೊಟ್ಟಿದೆ ಎಂದು ಸಚಿವ ಹೇಳಿದ್ದಾರೆ.

ರೈತ ಬಾಂಧವರು ಕೃಷಿ, ತೋಟಗಾರಿಕೆ ಬೆಳೆಯೊಂದಿಗೆ ಗಿಡ-ಮರಗಳನ್ನು ಬೆಳೆಸುವ ಮೂಲಕ ಹಸಿರು ಕರ್ನಾಟಕಕ್ಕೆ  ಸಹಕರಿಸಬೇಕು ಎಂದು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆರ್. ಶಂಕರ ರೈತ ಸಮುದಾಯಕ್ಕೆ ಕರೆ ನೀಡಿದರು.
ಅರಣ್ಯ ಇಲಾಖೆ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಸಂಯುಕ್ತಾಶ್ರಯದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡಕರ್ ಸಭಾಂಗಣದಲ್ಲಿ ಆಯೋಜಿಸಲಾದ “ವೃತ್ತ ಮಟ್ಟದ ಕೃಷಿ ಅರಣ್ಯ  ಕಾರ್ಯಾಗಾರ ”ವನ್ನು ಉದ್ಘಾಟಿಸಿ ಮಾತನಾಡಿದರು.

ಗಿಡ-ಮರಗಳನ್ನು ಬೆಳೆಸಲು ರೈತರಿಗೆ ಅನೇಕ ಪ್ರೋತ್ಸಾಹದಾಯಕ ಕಾರ್ಯಕ್ರಮಗಳನ್ನು ಅರಣ್ಯ ಇಲಾಖೆ ಜಾರಿಗೊಳಿಸಿದ್ದು, ಇದರ ಪ್ರಯೋಜನವನ್ನು ಅನ್ನದಾತ ಪಡೆಯಬೇಕು. ಕೃಷಿ ಅರಣ್ಯ ಯೋಜನೆಗಳ ಕುರಿತು ಮಾಹಿತಿ ನೀಡಲು ಧಾರವಾಡ, ಮಂಡ್ಯದಲ್ಲಿಯೂ ಸಹ ಇದೇ ರೀತಿಯ ವೃತ್ತ ಮಟ್ಟದ ಕೃಷಿ ಅರಣ್ಯ ಕಾರ್ಯಾಗಾರ ಮಾಡಿ ಪ್ರಗತಿಪರ ರೈತರಿಂದ ರೈತ ಸಮುದಾಯಕ್ಕೆ ತಿಳುವಳಿಕೆ ನೀಡಲಾಗಿದೆ ಎಂದರು.

ರೈತರ ಆರ್ಥಿಕವಾಗಿ ಸದೃಢಗೊಳ್ಳಲು ಕುರಿ, ಕೋಳಿ ಸಾಕಾಣಿಕೆ, ಹೈನುಗಾರಿಕೆಯಂತಹ ಆದಾಯೋತ್ಪನ್ನ ಕೃಷಿ ಚಟುವಟಿಕೆ ಕೈಗೊಳ್ಳಬೇಕು. ರೈತ ಸಮುದಾಯದ ಒಳಿತಿಗಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳು ರೂಪಿಸಿದ್ದು, ರಾಜ್ಯ ಸರ್ಕಾರ ಅನ್ನದಾತನೊಂದಿಗೆ ಇದೆ. ಯಾವುದೇ ಕಾರಣಕ್ಕೂ ದೃತಿಗೆಡದೆ ಬದುಕು ಸಾಗಿಸಿ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ