ಕರ್ನಾಟಕ ಬಂದ್ ಹಿಂದಕ್ಕೆ

ಬುಧವಾರ, 12 ಫೆಬ್ರವರಿ 2020 (16:04 IST)

ಕರ್ನಾಟಕ ಬಂದ್ ಹಿಂಪಡೆಯಿರಿ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.
 

ಫೆಬ್ರವರಿ 13 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಹಿಂಪಡೆಯಬೇಕು. ಹೀಗಂತ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸಿ.ಟಿ.ರವಿ ಮನವಿ ಮಾಡಿದ್ದಾರೆ.

ಕರ್ನಾಟಕ ಬಂದ್ ಕರೆ ಕೊಟ್ಟಿರುವ ಕನ್ನಡ ಪರ ಸಂಘಟನೆ ಅಹವಾಲನ್ನು ಸರ್ಕಾರ ಆಲಿಸಿದೆ. ಕನ್ನಡ ಭಾಷಾ ಮಾಧ್ಯಮ, ಕನ್ನಡ ಉಳಿಸುವ ಬೆಳೆಸುವ ಕೆಲಸಕ್ಕೆ ಸರ್ಕಾರ ಬದ್ದವಾಗಿದೆ. ಆದರೆ ಸರೋಜಿನಿಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧವಾಗಿದೆ.

ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸಲು ನಮ್ಮ ಸಮ್ಮತಿ ಇದೆ. ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸದೆ ಆಡಳಿತದಲ್ಲಿ ಕನ್ನಡ ಕಡ್ಡಾಯಗೊಳಿಸಲು ಸಾಧ್ಯವಿಲ್ಲ. ಆದರೂ ಸುಪ್ರಿಂ ಕೋರ್ಟನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆ ಸಾಧ್ಯವೇ ? ಎಂದು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ