ರಾಜ್ಯದ ಸಚಿವ ಹಾಗೂ ಸಂಸದರೊಬ್ಬರು ತಮ್ಮ ರಕ್ತ ನೀಡಿದ್ದಾರೆ.
ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹಾಗೂ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದಾನ ಮಾಡಿದರು.
ಡಾ.ಸುಧಾಕರ್ ಮಾತನಾಡಿ, ಕೋವಿಡ್ ವಿರುದ್ಧ ಹೋರಾಟ ನಡೆಯುತ್ತಿರುವ ಈ ದಿನಗಳಲ್ಲಿ ರಕ್ತನಿಧಿಗಳು ದಾನಿಗಳ ಕೊರತೆ ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲಿ ನಾನು ರಕ್ತದಾನ ಮಾಡಿದ್ದು ಸಾರ್ಥಕ ಭಾವ ಮೂಡಿಸಿದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ರಕ್ತದಾನ ಮಾಡುವುದು ಅತ್ಯಂತ ಶ್ರೇಷ್ಟ ಕಾರ್ಯ. ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಜನಪರವಾದ ಧೋರಣೆ ತಾಳಬೇಕು ಎಂದು ಮನವಿ ಮಾಡಿದರು.
ಡಾ.ಉಮೇಶ ಜಾಧವ ಅವರು ಮಾತನಾಡಿ, 120 ದಿನಗಳಿಗೊಮ್ಮೆ ರಕ್ತದಾನ ಮಾಡಿದರೆ ರೋಗದಿಂದ ಬಳಲುತ್ತಿರುವ ಹಾಗೂ ರಕ್ತ ವಿಲ್ಲದೆ ಸಾವನಪ್ಪುವ ರೋಗಿಗಳಿಗೆ ಬದಕಿಸುವ ಕೆಲಸ ಮಾಡಿದಂತಾಗುತ್ತದೆ ಎಂದರು.