ಆ ಕೆಲಸಕ್ಕೆ ಡೆಡ್ ಲೈನ್ ನೀಡಿದ ಸಚಿವ : ಅಧಿಕಾರಿಗಳು ಕಕ್ಕಾಬಿಕ್ಕಿ
ಗುರುವಾರ, 17 ಸೆಪ್ಟಂಬರ್ 2020 (19:20 IST)
ರಾಜ್ಯ ಸರಕಾರದ ಈ ಇಲಾಖೆಗೆ ಸಂಬಂಧಿಸಿದ ಎಲ್ಲಾ ಬಾಕಿ ಕೆಲಸಗಳನ್ನು ಎರಡು ವಾರಗಳಲ್ಲಿ ಪೂರ್ಣಗೊಳಿಸಬೇಕೆಂದು ಸಚಿವರೊಬ್ಬರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳೆ ಪರಿಹಾರ, ಪಿಂಚಣಿ ಸೌಲಭ್ಯ, ಸ್ಮಶಾನ ಭೂಮಿ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಬಾಕಿ ಉಳಿದ ಕೆಲಸಗಳು ಇನ್ನು ಎರಡು ವಾರಗಳೊಳಗೆ ಪೂರ್ಣಗೊಳ್ಳಬೇಕು.
ಆ ಕುರಿತು ಜಿಲ್ಲಾ ಮಂತ್ರಿಗಳಿಗೆ ವರದಿ ಸಲ್ಲಿಸಬೇಕು ಎಂದು ಕಂದಾಯ ಸಚಿವ ಆರ್. ಅಶೋಕ ಅವರು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊಪ್ಪಳ ಜಿಲ್ಲಾ ಪಂಚಾಯತನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕಳೆದ ಬಾರಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಉಂಟಾದ ಬೆಳೆಹಾನಿಗೆ ರೈತರಿಗೆ ಆರ್.ಟಿ.ಜಿ.ಎಸ್. ಮೂಲಕ ರೂ. 31.50 ಕೋಟಿ ರೂ. ಬೆಳೆ ಪರಿಹಾರ ಮೊತ್ತವನ್ನು ಜಮೆ ಮಾಡಲಾಗಿದೆ ಎಂದರು.