ಆ ಕಾರಣಕ್ಕೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಸಚಿವ

ಶುಕ್ರವಾರ, 15 ಮೇ 2020 (17:23 IST)
ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ಖಡಕ್ಕಾಗಿ ಎಚ್ಚರಿಕೆ ಕೊಟ್ಟ ಘಟನೆ ನಡೆದಿದೆ.

ಕ್ವಾರಂಟೈನ್ ನಲ್ಲಿ ಇರುವವರನ್ನ ಸರಿಯಾಗಿ ನೋಡಿಕೊಳ್ಳಬೇಕು. ಗುಣಮಟ್ಟದ ಊಟ, ತಿಂಡಿ ಕೊಡಬೇಕು. ಈ ವಿಚಾರದಲ್ಲಿ ದೂರು ಬಂದರೆ ಸುಮ್ಮನಿರೋದಿಲ್ಲ. ಸೌಲಭ್ಯ ಕಲ್ಪಿಸುವಲ್ಲಿ ವಿಳಂಬ ಮಾಡಿದ್ರೆ ಕ್ರಮ ತಗೋಬೇಕಾಗುತ್ತೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಖಡಕ್ಕಾಗಿ ಹೇಳಿದ್ದಾರೆ.

ಕೆ ಆರ್ ಪೇಟೆ ತಾಲೂಕಿನ ಕಿತ್ತೂರು ರಾಣಿ ವಸತಿ ಶಾಲೆಗೆ ಭೇಟಿ ನೀಡಿದ ಸಚಿವರು,   ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹೊರಗಡೆಯಿಂದ ಬಂದವರಿಗೆ ಕ್ವಾರಂಟೈನ್ ಮಾಡಲಾಗಿದೆ. ಅವರನ್ನ ಸರಿಯಾಗಿ ನೋಡಿಕೊಳ್ಳೋದು ನಮ್ಮ ಕರ್ತವ್ಯ. ಆದ್ರೆ ಊಟ, ತಿಂಡಿ, ಹಾಲು, ಇತ್ಯಾದಿ ವ್ಯವಸ್ಥೆಗಳನ್ನು ಸರಿಯಾಗಿ ಮಾಡುತ್ತಿಲ್ಲ ಎಂಬ ಆರೋಪ ಇದೆ. ಹೀಗೆ ನಡೆದುಕೊಂಡರೆ ಕ್ರಮ ತೆಗೆದುಕೊಳ್ಳಬೇಕಾಗತ್ತೆ ಎಂದು ಎಚ್ಚರಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ