ಅಪಘಾತದ ಗಾಯಾಳು ರಕ್ಷಿಸಿ ಮಾನವೀಯತೆ ಮೆರೆದ ಶಾಸಕ

ಶನಿವಾರ, 13 ಅಕ್ಟೋಬರ್ 2018 (14:53 IST)
ಅಪಘಾತದಲ್ಲಿ ಗಾಯಾಳುವಾಗಿದ್ದವರನ್ನು ರಕ್ಷಿಸಿ ಮಾನವೀಯತೆ ಮೆರೆದ ಶಾಸಕರ ಜನಪರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಶಾಸಕ ರಾಮಪ್ಪ ದಾವಣಗೆರೆ ಜಿಲ್ಲೆ ಹರಿಹರ ಕ್ಷೇತ್ರದ ಜನಪ್ರತಿನಿಧಿಯಾಗಿದ್ದಾರೆ. ರಾತ್ರಿ ನಡೆದಿದ್ದ ಘಟನೆಯಲ್ಲಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.

ಹರಿಹರದ ವಿದ್ಯಾನಗರ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತವಾಗಿತ್ತು. ಈ ವೇಳೆ ಬೈಕ್ ನಲ್ಲಿದ್ದ ದಂಪತಿ ರಕ್ತದ  ಮಡುವಿನಲ್ಲಿ ಬಿದ್ದಿದ್ದರು. ಲಿಂಗರಾಜ್ ಮತ್ತು ಪತ್ನಿ ಇಬ್ಬರಿಗೂ ತೀವ್ರ ಗಾಯಗಳಾಗಿದ್ದವು.
ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಶಾಸಕ ರಾಮಪ್ಪ, ಕೂಡಲೇ ತಮ್ಮ ಕಾರಿನಲ್ಲಿ  ಗಾಯಾಳುಗಳನ್ನ  ದಾವಣಗೆರೆ ಆಸ್ಪತ್ರೆಗೆ ಸಾಗಿಸಿದರು.

ಈ ಹಿಂದೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಳುಗಳನ್ನು ಸ್ವಂತ ಕಾರಿನಲ್ಲಿ ಆಸ್ಪತ್ರೆ ಗೆ ಸಾಗಿಸಿದ್ದರು ರಾಮಪ್ಪ.
ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಿಂಗರಾಜ್ ಪತ್ನಿ ಅಪಾಯದಿಂದ ಪಾರಾಗಿದ್ದಾರೆ.
ಹರಿಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ