ಜನ್ಮ ನೀಡಿದ ಮಕ್ಕಳಿಗೆ ವಿಷ ನೀಡಿ ತಾಯಿ ಆತ್ಮಹತ್ಯೆ

ಭಾನುವಾರ, 27 ಜನವರಿ 2019 (14:43 IST)
ಜನ್ಮ ನೀಡಿದ ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ವಿಷ ಕೊಟ್ಟು ತಾಯಿಯೊಬ್ಬಳು ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

 ಚಿಕ್ಕಬಳ್ಳಾಪುರದಲ್ಲಿ ಮನಕಲುಕುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರದ ವಿಶ್ವೇಶ್ವರಯ್ಯ ಬಡಾವಣೆಯ ಉಷಾ(30) ಮಕ್ಕಳಾದ ಶಮಂತ್(8), ಶಾನ್ವಿ(6)ಗೆ ವಿಷ ಉಣಿಸಿ ತಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಸಾವಿಗೆ ಸ್ಪಷ್ಟ ಮಾಹಿತಿ ತಿಳಿದು ಬಂದಿಲ್ಲ. ಉಷಾ ತನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಡೆತ್ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಚಿಕ್ಕಬಳ್ಳಾಪುರ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪತಿ ಅಶ್ವತ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ