ಹೈಕಮಾಂಡ್‌ನತ್ತ ಸಿಎಂ ಸಿದ್ದರಾಮಯ್ಯ, ಡಿಕೆಶಿ: ಕುತೂಹಲ ಸೃಷ್ಟಿಸಿದ ನಾಯಕರ ನಡೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಪ್ರಮುಖ ವಿಚಾರಗಳು ಚರ್ಚೆಯಾಗುವ ಸಾಧ್ಯತೆಯಿದೆ.
ಹೈಕಮಾಂಡ್ ಭೇಟಿ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ವರ್ಚಸ್ಸಿಗೆ ಧಕ್ಕೆ ತರುತ್ತಿರುವ ವಿಚಾರಗಳ ಕುರಿತು ಚರ್ಚೆಯಾಗುವ ಸಾಧ್ಯತೆಗಳಿವೆ ಎಂದೂ ಮೂಲಗಳು ತಿಳಿಸುವೆ.