ರಾಷ್ಟ್ರಮಟ್ಟದಲ್ಲಿ ಹೆಸರಾದ ಸ್ಥಳ ಈಗ ಬೂದಿಗುಡ್ಡೆಯಾಗಿದೆ ಎಂದ ಶಾಸಕ
ರಾಷ್ಟ್ರಮಟ್ಟದಲ್ಲಿ ಹೆಸರು ಪಡೆದಿದ್ದ ಬಂಡೀಪುರ ಉದ್ಯಾನವನ ಈಗ ಬೂದಿ ಗುಡ್ಡೆಯಾಗಿ ಕಾಣುತ್ತಿದೆ ಎಂದು ಶಾಸಕರೊಬ್ಬರು ಹೇಳಿದ್ದಾರೆ.
ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ನಾಶವಾಗಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕೆಂದು ಗುಂಡ್ಲುಪೇಟೆ ಶಾಸಕ ನಿರಂಜನ ಕುಮಾರ್ ಆಗ್ರಹ ಮಾಡಿದ್ದಾರೆ. ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿ ಬಿದ್ದು ಸಾವಿರಾರು ಹೆಕ್ಟೇರ್ ಅರಣ್ಯ ನಾಶವಾಗಿದೆ. ಯಾರೋ ಕಿಡಿಗೇಡಿಗಳು ಈ ದುಷ್ಕೃತ್ಯ ಮಾಡಿರಬಹುದೆಂದು ಅರಣ್ಯಾಧಿಕಾರಿಗಳು ಹೇಳುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಬಂಡೀಪುರ ಉದ್ಯಾನವನ ಹೆಸರಾಗಿತ್ತು.
ಈಗ ಎಲ್ಲೆಡೆ ಬೂದಿ ಗುಡ್ಡೆಯೇ ಕಾಣುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.