ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ, ಮಹತ್ವದ ಬೆಳವಣಿಗೆ
ವಿಮಾನ ನಿಲ್ದಾಣದಲ್ಲಿ ಫೆ.12 ರಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್ ಅವರನ್ನು ಪೊಲೀಸರು ವಶಕ್ಕ ಪಡೆದಿದ್ದರು. ಮರುದಿನ ಆರೋಗ್ಯ ತಪಾಸಣೆ ನಡೆಸಿದ್ದ ವೇಳೆ ಅವರಿಗೆ ಇಸಿಜಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರಿಗೆ ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್ ಮಾಡಿಸಲಾಗಿತ್ತು.
ಇನ್ನೂ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾಗೊಂಡ ಬೆನ್ನಲ್ಲೇ ಸುಪ್ರೀಂ ಕದ ತಟ್ಟಿದ ಬಸವರಾಜ್‌ಗೆ ಅಲ್ಲೂ ಹಿನ್ನಡೆಯಾಗಿತ್ತು.