ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಬರ್ಬರ ಕೊಲೆ

ಸೋಮವಾರ, 24 ಸೆಪ್ಟಂಬರ್ 2018 (18:44 IST)
ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬೆಂಗಳೂರಿನ ಅಳ್ಳಾಲಸಂದ್ರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷನನ್ನು ಮಚ್ಚು ಲಾಂಗ್ ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.

ಯಲಹಂಕ ಬಳಿ ಈ ಘಟನೆ ನಡೆದಿದೆ. ಅಳ್ಳಾಲಸಂದ್ರದ ಅರುಣ (26) ಕೊಲೆಯಾದ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದಾನೆ.

ನಾಲ್ಕೈದು ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗಾರರ ಬಂಧನಕ್ಕೆ ಪೊಲೀಸರು ಎರಡು ತಂಡಗಳನ್ನು ರಚನೆ ಮಾಡಿದ್ದಾರೆ. ಈ ಕುರಿತು ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ