ಜೆಡಿಎಸ್ ಮುಖಂಡನ ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು

ಮಂಗಳವಾರ, 13 ನವೆಂಬರ್ 2018 (07:33 IST)
ರಾಮನಗರ : ಜೆಡಿಎಸ್ ಪಕ್ಷದ ರಾಜ್ಯ ಎಸ್.ಸಿ. ಹಾಗು ಎಸ್.ಟಿ. ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಟಿ ರಾಜಗೋಪಾಲ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ನಡೆದಿದೆ.


ಮೂಲತಃ ಜಿಲ್ಲೆಯ ಪಿ.ರಾಂಪುರ ಗ್ರಾಮದ ನಿವಾಸಿಯಾಗಿದ್ದ ರಾಜಗೋಪಾಲ್ ಕನಕಪುರದಲ್ಲಿ ವಾಸ ಮಾಡುತ್ತಿದ್ದರು. ಇವರು  ಸೋಮವಾರ ಸಂಜೆ ಕೆಲವು ವ್ಯಕ್ತಿಗಳ ಜೊತೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದರು. ಬಳಿಕ ರಾಜ್‍ಗೋಪಾಲ್ ಕನಕಪುರದ ರಾಮನಗರ ರಸ್ತೆಯಲ್ಲಿನ ಜನನಿ ಆಸ್ಪತ್ರೆ ಬಳಿ ಟೀ ಕುಡಿಯುತ್ತಿದ್ದಾಗ ಅಲ್ಲಿಗೆ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕುತ್ತಿಗೆ ಹಾಗೂ ಎದೆ ಭಾಗಕ್ಕೆ ಇರಿದು ಕೊಚ್ಚಿ ಕೊಲೆ ಮಾಡಿದ್ದಾರೆ.


ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಹಾಗೇ ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಇದೀಗ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ