ಮತ್ತೊಬ್ಬ ಪಾಕಿಸ್ತಾನಿ ಉಗ್ರನ ನಿಗೂಢ ಹತ್ಯೆ...!

ಬುಧವಾರ, 6 ಡಿಸೆಂಬರ್ 2023 (15:21 IST)
ಭಯೋತ್ಪಾದಕ ಸಂಘಟನೆ ಜೈಷ್-ಎ-ಮೊಹಮ್ಮದ್  ಬೆಂಬಲಿಗ ಹಾಗೂ ವಿವಾದಾತ್ಮಕ ಇಸ್ಲಾಮಿಕ್‌ ಬೋಧಕ ಮೌಲಾನಾ ಶೇರ್ ಬಹದ್ದೂರ್ ಎಂಬಾತನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಪೇಶಾವರದ ಖೈಬರ್ ಪಖ್ತುಂಖ್ವಾದಲ್ಲಿ ಈ ಘಟನೆ ನಡೆದಿದೆ ಎಂದು ಕೆಲವು ವರದಿಗಳು ಹೇಳಿವೆ. ಆದರೆ ಇದನ್ನು ಪಾಕ್‌ ಸರ್ಕಾರವಾಗಲೀ ಅಲ್ಲಿನ ಪೊಲೀಸರಾಗಲೀ ಖಚಿತಪಡಿಸಿಲ್ಲ ಅಂತಾ ಮೂಲಗಳು ಹೇಳಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ