ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಜನರಲ್ಲಿ ಮನವಿ ಮಾಡಿಕೊಂಡ ಧರ್ಮಸ್ಥಳದ ಧರ್ಮಾಧಿಕಾರಿ

ಶುಕ್ರವಾರ, 27 ಮಾರ್ಚ್ 2020 (10:03 IST)
ಮಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಕಿಡಿಗೇಡಿಗಳಿಂದ ಸುಳ್ಳು ಸುದ್ದಿಯೊಂದನ್ನು ಹಬ್ಬಿಸಿದ ಹಿನ್ನಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜನರಲ್ಲಿ ಮನವಿಯೊಂದನ್ನು ಮಾಡಿದ್ದಾರೆ.

ಧರ್ಮಸ್ಥಳದಲ್ಲಿ ದೇವರ ಮುಂದೆ ಹಚ್ಚಿದ ನಂದಾದೀಪ ಆರಿಹೋಗಿದೆ. ಆದಕಾರಣ ಎಲ್ಲರೂ ತಮ್ಮ ಮನೆಗಳಲ್ಲಿ ದೀಪ ಹಚ್ಚಿ ಎಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹಬ್ಬಿಸಿದ್ದಾರೆ. ಇದನ್ನು ನಂಬಿದ ಕಡೂರು, ತರೀಕೆರೆ ಗ್ರಾಮೀಣ ಭಾಗದ ಮುಗ್ಧ ಜನರು ಆತಂಕಗೊಂಡು ಮನೆ ಮುಂದೆ ದೀಪ ಹಚ್ಚಿದ್ದಾರೆ.

 

ಇದನ್ನು ಗಮನಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಇದು ಸುಳ್ಳು ಸುದ್ದಿ, ಈ ವದಂತಿಗೆ ಭಕ್ತಾಧಿಗಳು ಕಿವಿಗೊಡಬೇಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ