ಅಕ್ರಮ-ಸಕ್ರಮ ತಡೆಯಾಜ್ಞೆ ತೆರವಿಗೆ ಅಗತ್ಯ ಕ್ರಮ: ಸಿಎಂ ಸಿದ್ದರಾಮಯ್ಯ

ಶನಿವಾರ, 14 ಜನವರಿ 2017 (17:51 IST)
ಅಕ್ರಮ-ಸಕ್ರಮ ಯೋಜನೆಗೆ ಸುಪ್ರೀಂಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ-ಸಕ್ರಮ ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಸರಕಾರ ಎಲ್ಲ ಸಿದ್ಧತೆಗಳನ್ನು ನಡೆಸಿತ್ತು. ಆದರೆ, ಇದಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆದಷ್ಟು ಬೇಗ ಸುಪ್ರೀಕೋರ್ಟ್ ತಡೆಯಾಜ್ಞೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುತ್ತೇನೆ ಎಂದರು. 
 
ಏಕಾಏಕಿ ಗರಿಷ್ಠ ಮುಖಬೆಲೆಯ ನೋಟುಗಳನ್ನು ನಿಷೇಧ ಮಾಡುವ ಮೂಲಕ ಕೇಂದ್ರ ಸರಕಾರ ತಪ್ಪು ನಿರ್ಧಾರ ಕೈಗೊಂಡಿದಲ್ಲದೆ, ಬ್ಯಾಂಕ್ ವ್ಯವಹಾರಗಳ ಮೇಲೆ ತೆರಿಗೆ ವಿಧಿಸಲು ಮುಂದಾಗಿದೆ. ಇದು ಸರಿಯಾದ ಕ್ರಮವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ