ಮುಂದಿನ 10 ವರ್ಷ ನೀರಾವರಿ ದಶಕ ; ಬೊಮ್ಮಾಯಿ

ಶುಕ್ರವಾರ, 20 ಜನವರಿ 2023 (08:20 IST)
ಯಾದಗಿರಿ : ಮುಂದಿನ 10 ವರ್ಷಗಳನ್ನು ನೀರಾವರಿ ದಶಕವೆಂದು ಘೋಷಿಸಲಾಗುವುದು.

ಈ ಮೂಲಕ 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಜಿಲ್ಲೆಯ ಕೊಡೇಕಲ್ ಹೊರವಲಯದಲ್ಲಿ 10,863 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ರಾಜ್ಯದಲ್ಲಿ 40.66 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶದ ಗುರಿ ಇದ್ದು, ಇದುವರೆಗೆ 30ಲಕ್ಷ ಹೆಕ್ಟೇರ್ ಭೂಮಿಗೆ ನೀರುಣಿಸಲಾಗುತ್ತಿದೆ. ಬಾಕಿ ಉಳಿದ 10.66ಲಕ್ಷ ಹೆಕ್ಟೇರ್ ಭೂಮಿಯನ್ನು ನೀರಾವರಿಗೆ ಒಳಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ