ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳ ಸಂಖ್ಯೆ ಇಳಿಮುಖ

ಭಾನುವಾರ, 6 ಆಗಸ್ಟ್ 2023 (13:00 IST)
ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಪೊಲೀಸರು ಕಾರ್ಯಾಚರಣೆಗೆ ಇಳಿದು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಪರಿಣಾಮ ಅಪಘಾತ ಸಂಖ್ಯೆ ಇಳಿಮುಖಗೊಂಡಿದೆ. ಈ ಮೊದಲು ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಅಪಘಾತಗಳು ಸಂಭವಿಸಿ ಸಾವು ನೋವು ಸಂಭವಿಸುತ್ತಿತ್ತು. ಆದರೀಗ ಸುರಕ್ಷತೆ ಮತ್ತು ಅಪಘಾತ ತಡೆಗೆ ಕೆಲವು ಕ್ರಮಗಳನ್ನು ಕೈಗೊಂಡ ಪರಿಣಾಮ ಅಪಘಾತಗಳ ಸಂಖ್ಯೆ ಕ್ಷೀಣಿಸಿದೆ. ಎಕ್ಸ್‌ ಪ್ರೆಸ್‌ ವೇನಲ್ಲಿ ಬೆಂಗಳೂರಿನಿಂದ ಮೈಸೂರಿನವರೆಗೆ ಮೇ ತಿಂಗಳಲ್ಲಿ ಸಂಭವಿಸಿದ ಅಪಘಾತದಲ್ಲಿ 29 ಮಂದಿ ಸಾವನ್ನಪ್ಪಿದರೆ, ಜೂನ್‌ ತಿಂಗಳಲ್ಲಿ 28 ಮಂದಿ ಕೊನೆಯುಸಿರೆಳೆದಿದ್ದರು. ಜುಲೈ ತಿಂಗಳಲ್ಲಿ ರಸ್ತೆ ಸುರಕ್ಷತೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದರಿಂದ ಅಪಘಾತಗಳ ಪ್ರಮಾಣ ಕುಸಿದು ಸಾವಿನ ಸಂಖ್ಯೆ 8ಕ್ಕೆ ಇಳಿದಿದೆ. ಇದರಲ್ಲಿ ರಾಮನಗರ ವ್ಯಾಪ್ತಿಯಲ್ಲಿ 3, ಮಂಡ್ಯ ವ್ಯಾಪ್ತಿಯಲ್ಲಿ 5 ಮಂದಿ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಇನ್ನು ಕರ್ನಾಟಕ ಪೊಲೀಸ್‌ ಇಲಾಖೆ ಕೂಡ ಇಂಟರ್‌ ಸೆಪ್ಟರ್‌ಗಳ ಮೂಲಕ ವೇಗದ ಮಿತಿಯನ್ನು ಜಾರಿಗೆ ತರಲು ಹಲವು ಉಪಕ್ರಮಗಳನ್ನು ತೆಗೆದುಕೊಂಡಿದೆ. ತುರ್ತು ಸೇವೆಗಾಗಿ ಬೇಸಿಕ್‌ ಲೈಫ್‌ ಸಪೋರ್ಟ್​ ಸಿಸ್ಟಮ್‌ ಹೊಂದಿರುವ ನಾಲ್ಕು ಆಂಬುಲೆನ್ಸ್‌ಗಳನ್ನು ನಿಯೋಜಿಸಲಾಗಿದ್ದು, ಪ್ಯಾರಾಮೆಡಿಕಲ್‌ ಸಿಬ್ಬಂದಿ ಕೂಡ ಹೆದ್ದಾರಿಯಲ್ಲಿ ಇದ್ದಾರೆ. ಎಲ್ಲ ಟೋಲ್‌ ಪ್ಲಾಜಾಗಳಲ್ಲಿ ಪ್ರಥಮ ಚಿಕಿತ್ಸೆ ಕಿಟ್‌ಗಳನ್ನು ಇಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ