ಬರಪೀಡಿತ ತಾಲೂಕುಗಳ ಸಂಖ್ಯೆ 195ರಿಂದ 216ಕ್ಕೆ ಏರಿಕೆ
ರಾಜ್ಯದಲ್ಲಿ ಈಗಾಗಲೇ ಆಗಸ್ಟ್ ತಿಂಗಳಾಂತ್ಯಕ್ಕೆ ಪರಿಗಣಿಸಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿತ್ತು. ಇದಾದ ನಂತರ ಸೆಪ್ಟಂಬರ್ ತಿಂಗಳಲ್ಲಿಯೂ ಮಳೆ ಕೊರತೆ ಉಂಟಾಗಿದ್ದರಿಂದ ಹೆಚ್ಚುವರಿ 21 ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.