ಕೊರೊನಾ ವಿಚಾರದಲ್ಲಿ ರಾಜ್ಯದ ಜನತೆ ಆತಂಕ ಪಡೋದು ಬೇಡ- ಸಿಎಂ ಸ್ಪಷ್ಟನೆ

ಬುಧವಾರ, 4 ಮಾರ್ಚ್ 2020 (11:32 IST)
ಬೆಂಗಳೂರು : ದೇಶದಲ್ಲಿ ಕೊರೊನಾ ವೈರಸ್ ಪ್ರಕರಣ ದಾಖಲಾಗುತ್ತಿದ್ದ ಹಿನ್ನಲೆಯಲ್ಲಿ ಇದೀಗ ಆತಂಕಗೊಂಡ ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.


ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೆ ಯಾವುದೇ ಸೋಂಕಿತರು ಪತ್ತೆಯಾಗಿಲ್ಲ. ಆರೋಗ್ಯ ಸಚಿವರು ಈ ಬಗ್ಗೆ ಈಗಾಗಲೇ ಮಾತನಾಡಿದ್ದಾರೆ. ಕೊರೊನಾ ವಿಚಾರದಲ್ಲಿ ರಾಜ್ಯದ ಜನತೆ ಆತಂಕ ಪಡೋದು ಬೇಡ. ಕೊರೊನಾ ಸೋಂಕಿತರ ಪತ್ತೆಗೆ ಏರ್ ಪೋರ್ಟ್ ನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ