ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಯನ್ನು ಕೊಂದ ದುಷ್ಕರ್ಮಿಗಳು

ಗುರುವಾರ, 16 ಮೇ 2019 (11:22 IST)
ರಾಮನಗರ : ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ತಲೆಯ ಮೇಲೆ ಕಲ್ಲು ಎತ್ತಾಕಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ನಡೆದಿದೆ.




ಯರೇಹಳ್ಳಿ ಗ್ರಾಮದ ನಿವಾಸಿ ಪುಟ್ಟರಾಜು (45) ಕೊಲೆಯಾದ ವ್ಯಕ್ತಿ. ಬುಧವಾರ ತಡರಾತ್ರಿ ಪುಟ್ಟರಾಜು ಬೈಕ್ ನಲ್ಲಿ ಬರುತ್ತಿರುವಾಗ ಅವರ ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು ಬಳಿಕ ಅವರ ಮೇಲೆ ಹಲ್ಲೆ ಮಾಡಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.


ಈ ಬಗ್ಗೆ ಮಾಹಿತಿ ತಿಳಿದು ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ