ಬೆಳಗಾವಿ ಜಿಲ್ಲೆಯೂ ಕಂಪ್ಲೀಟ್ ಸೀಲ್ ಡೌನ್ ಮಾಡುವ ಸಾಧ್ಯತೆ!

ಶುಕ್ರವಾರ, 10 ಏಪ್ರಿಲ್ 2020 (09:32 IST)
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ 10 ಜನರಿಗೆ ಕೊರೊನಾ ಹಿನ್ನಲೆ ಬೆಳಗಾವಿ ಜಿಲ್ಲೆಯೂ ಕಂಪ್ಲೀಟ್ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಬೆಳಗಾವಿ ಸಂಪೂರ್ಣ ಲಾಕ್ ಡೌನ್ ಮಾಡಲಾಗಿತ್ತು. ಆದರೂ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಆದಕಾರಣ ಬೆಳಗಾವಿ ಜಿಲ್ಲೆಯೂ ಕಂಪ್ಲೀಟ್ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಬೆಳಗಾವಿ ಪ್ರವೇಶಿಸುವ ಪ್ರಮುಖ ರಸ್ತೆಗಳಲ್ಲಿ ವಾಹನಗಳನ್ನು  ತಪಾಸಣೆ ಮಾಡಲಾಗುತ್ತಿದೆ. ತುರ್ತು ಸೇವೆಗಳ ವಾಹನಗಳಿಗೆ ಮಾತ್ರ ನಗರಕ್ಕೆ ಪ್ರವೇಶ ನೀಡಲಾಗುತ್ತಿದೆ. ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದು, ಪ್ರತಿಯೊಂದು ವಾಹನ ಪರಿಶೀಲಿಸಿ ಬಿಡುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ