ಇಂದು ಪ್ರತಾಪ್ ಚಂದ್ರಶೆಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ

ಗುರುವಾರ, 4 ಫೆಬ್ರವರಿ 2021 (11:53 IST)
ಬೆಂಗಳೂರು : ಇಂದು ಪ್ರತಾಪ್ ಚಂದ್ರಶೆಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ ಗೃಹ ಸಚಿವ ಬೊಮ್ಮಾಯಿ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕೋಟ ಶ್ರೀನಿವಾಶ್ ಪೂಜಾರಿಯೂ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಸಭಾಪತಿ ವಿರುದ್ಧ ಈಗಾಗಲೇ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ. ಅಲ್ಲದೇ ಕಾಂಗ್ರೆಸ್ ಕೂಡ ರಾಜೀನಾಮೆ ನಿರ್ಧಾರ ಪ್ರತಾಪ್ ಚಂದ್ರಶೆಟ್ಟಿ ಅವರ ವಿವೇಚನೆಗೆ ಬಿಟ್ಟಿದ್ದು ಎಂದಿದ್ದಾರೆ. ಹಾಗಾಗಿ ಇಂದು ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ