ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಕಾರ್ಯಕ್ರಮ ರದ್ದು!

ಶನಿವಾರ, 11 ಮಾರ್ಚ್ 2023 (11:21 IST)
ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ  ನಡೆಯಬೇಕಿದ್ದ ಪ್ರಜಾಧ್ವನಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ರಾಮನಗರ ಕ್ಷೇತ್ರದ ಮೂರು ಕಡೆ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಾಮನಗರ ತಾಲೂಕಿನ ಮರಳವಾಡಿ, ಹಾರೋಹಳ್ಳಿ ಹಾಗೂ ರಾಮನಗರ ಜೂನಿಯರ್ ಕಾಲೇಜು ಮೈದಾನದಲ್ಲಿ ವೇದಿಕೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಧ್ರುವ ನಾರಾಯಣ್ ಅವರ ನಿಧನದಿಂದಾಗಿ ಪ್ರಜಾಧ್ವನಿ ಕಾರ್ಯಕ್ರಮ ಮುಂದೂಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಂಸದ ಡಿಕೆ ಸುರೇಶ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ