ಪ್ರತಿ ಲೀಟರ್ ಹಾಲಿನ ಬೆಲೆ 2 ರೂ ಏರಿಕೆ

ಬುಧವಾರ, 23 ನವೆಂಬರ್ 2022 (20:03 IST)
ಕೆಎಂಎಫ್ ನಂದಿನಿ ಹಾಲಿನ ಬೆಲೆ ಹೆಚ್ಚಳ ಮಾಡಿದೆ. ಪ್ರತಿ ಲೀಟರ್ ಹಾಲಿನ ಬೆಲೆ 2 ರೂ ಏರಿಕೆ ಮಾಡಲಾಗಿದೆ ಎಂದು ಕೆಎಂಎಫ್ ಬಾಲಚಂದ್ರ ಜಾರಕಿಹೊಳಿ ಘೋಷಣೆ ಮಾಡಿದ್ದಾರೆ. ಕೆಎಂಎಫ್ ನಂದಿನಿ ಹಾಲು ಲೀಟರ್ ಗೆ 2 ರೂಪಾಯಿ ಹೆಚ್ಚಿಸಿದ್ದು, ಮೊಸರು ಒಂದು ಲೀಟರ್ ಗೆ 45 ರಿಂದ 47 ರೂಪಾಯಿಗೆ ಏರಿಕೆಯಾಗಿದೆ. ನಂದಿನಿ ಹಾಗೂ ಮೊಸರಿನ ಪರಿಸ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ. ಇಂದು ಬೆಂಗಳೂರಿನಲ್ಲಿ ನಡೆದ ಕೆಎಂಎಫ್ ನಿರ್ದೇಶಕರ ಸಭೆಯಲ್ಲಿ ಹಾಲು ಹಾಗೂ ಮೊಸರಿನ ದರ ಏರಿಕೆ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿದ್ದು,  ನಂದಿನಿ ಹಾಲಿನ ದರ ಏರಿಕೆ ನಾಳೆಯಿಂದಲೇ ಜಾರಿಗೆ ಬರಲಿದೆ. ಹೆಚ್ಚುವರಿ ಹಣವನ್ನು ಹಾಲು ಉತ್ಪಾದಕರಿಗೆ ನೀಡಲಾಗುವುದು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು. ಹೆಚ್ಚಳ ಮಾಡಿರುವ ದರದಲ್ಲಿ ಪೂರ್ತಿ ಹಣ ಹಾಲು ಉತ್ಪಾದಕರಿಗೆ ನೀಡಲು ಕೆಎಂಎಫ್ ನಿರ್ಧರಿಸಿದೆ. ಈ ಮೂಲಕ ರೈತರಿಗೆ ಪ್ರತಿ ಲೀಟರ್ ಹಾಲಿಗೆ 31ರಿಂದ 32 ರೂಪಾಯಿ ಸಿಗಲಿದೆ. ಹಾಲು ಉತ್ಪಾದಕರಿಗೆ ಪ್ರಸ್ತುತ 29 ರೂಪಾಯಿ ನೀಡಲಾಗುತ್ತಿತ್ತು. ಒಂದೊಂದು ಒಕ್ಕೂಟ ಒಂದೊಂದು ದರ ನಿಗದಿ ಮಾಡಲಾಗಿದೆ. ಹಾಲು ಉತ್ಪಾದಕರಿಗೆ ಸರಾಸರಿ 31ರಿಂದ 32 ರೂಪಾಯಿ ಸಿಗಲಿದೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ