ಈ ರೋಗಕ್ಕೆ ಚಿಕಿತ್ಸೆ ನೀಡದಿದ್ದರೆ ಖಾಸಗಿ ವೈದ್ಯರ ಲೈಸನ್ಸ್ ರದ್ದು

ಶುಕ್ರವಾರ, 8 ಮೇ 2020 (21:08 IST)
ಈ ರೋಗಗಳಿಗೆ ಚಿಕಿತ್ಸೆ ನೀಡದಿದ್ದರೆ ಖಾಸಗಿ ವೈದ್ಯರ ನೋಂದಣಿ ರದ್ದುಮಾವುದಾಗಿ ಆರೊಗ್ಯ ಸಚಿವರು ಎಚ್ಚರಿಕೆ ನೀಡಿದ್ದಾರೆ.
 
ಕೋವಿಡ್-19 ಕೊರೊನಾ ವೈರಸ್ ಚಿಕಿತ್ಸೆ ಹಾಗೂ ನಿಯಂತ್ರಣಕ್ಕಾಗಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಪಿಎಂಇ ಕಾಯ್ದೆಯಡಿ ನೋಂದಣಿಯಾಗಿರುವ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ತೆರೆದು ಕೋವಿಡ್‍ಯೇತರವಾದ ಉಳಿದ ಖಾಯಿಲೆಗಳಿಗೆ ಚಿಕಿತ್ಸೆ ನೀಡಿ ನೆರವಿಗೆ ಬರಬೇಕು.

ಸಹಕಾರ ನೀಡದಿದ್ದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

 ​​ಖಾಸಗಿ ವೈದ್ಯರು ಮೊದಲಿನಂತೆ ತಮ್ಮ ಆಸ್ಪತ್ರೆಗಳನ್ನು ತೆರೆದು ಜನರ ಸಾಮಾನ್ಯ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಇದರಿಂದ ಸರಕಾರಿ ಆಸ್ಪತ್ರೆ ವೈದ್ಯರ ಮೇಲಿನ ಒತ್ತಡ ಕಡಿಮೆಯಾಗಿ, ಕೋವಿಡ್ ಪ್ರಕರಣಗಳಿಗೆ ಆದ್ಯತೆ ನೀಡಲು ಅನುಕೂಲವಾಗುತ್ತದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ