ಒಂದೆಡೆ ಮಳೆ ಮತ್ತೊಂದೆಡೆ ಕುಡಿಯುವ ನೀರಿಗಾಗಿ ಹಾಹಾಕಾರ..!

ಶುಕ್ರವಾರ, 21 ಸೆಪ್ಟಂಬರ್ 2018 (17:09 IST)
ಉತ್ತರ ಕರ್ನಾಟಕ ಕೆಲವೆಡೆ ಮಳೆ ನಿರಂತರವಾಗಿ ಸುರಿಯುತ್ತಿದ್ದರೆ, ಮತ್ತೊಂದು ಕಡೆ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಪುಟಪಾಕ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜನರು ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಗಡಿಯಲ್ಲಿರುವ ಪುಟಪಾಕ ಗ್ರಾಮ ತೆಲಂಗಾಣ ರಾಜ್ಯದ ವಾಣಿಜ್ಯ ಪಟ್ಟಣ ನಾರಾಯಣಪೇಟಕ್ಕೆ ಹೋಗುವ ಹೆದ್ದಾರಿಯಲ್ಲಿದೆ. ಗುರುಮಠಕಲ್‌ನಿಂದ 10 ಕಿ.ಮೀ ದೂರದಲ್ಲಿದೆ. ಈ ಬಾರಿಯ ಮುಂಗಾರು ಇನ್ನೂ ಮುಗಿದಿಲ್ಲ, ಆದ್ರೂ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ‌.

ಗ್ರಾಮದ ನಲ್ಲಿಗಳಲ್ಲಿ ಕುಡಿಯುವ ನೀರು ಬಾರದೇ ಇರುವುದರಿಂದ 2 ಕಿ.ಮೀ ವರೆಗೂ ನಡೆದುಕೊಂಡೇ ಗ್ರಾಮಸ್ಥರು ಖಾಸಗಿ ಬಾವಿ, ಕೊಳವೆ ಬಾವಿಗಳಿಂದ ನೀರನ್ನು ಹೊತ್ತು ತರುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ  
ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಅನ್ನೋದು ಗ್ರಾಮಸ್ಥರ ಆಗ್ರಹವಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ