ವಿದೇಶದಲ್ಲಿರುವ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಪ್ರಕ್ರಿಯೆ ಶುರು

sampriya

ಗುರುವಾರ, 23 ಮೇ 2024 (20:14 IST)
Photo By X
ನವದೆಹಲಿ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬೇಕಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆಯನ್ನು ವಿದೇಶಾಂಗ ಸಚಿವಾಲಯ ಆರಂಭಿಸಿರುವುದಾಘಿ ತಿಳಿದುಬಂದಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿಗೆ ಬೇಕಾಗಿರುವ ಪ್ರಜ್ವಲ್‌ ರೇವಣ್ಣ ಅವರು ಸದ್ಯ ವಿದೇಶದಲ್ಲಿದ್ದಾರೆ. ಈಗಾಗಲೇ ಪ್ರಜ್ವಲ್‌ ರೇವಣ್ಣ ಅವರು ತನಿಖೆ ಎದುರಿಸುವಂತೆ ನೋಟಿಸ್‌ ನೀಡಲಾಗಿದೆ.

ಇನ್ನೂ ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು ಎಂದು ಕರ್ನಾಟಕ ಸರ್ಕಾರವು ಕೋರಿಕೊಂಡಿತ್ತು. ಈ ಕೋರಿಕೆಯ ಮೇರೆಗೆ ಸಚಿವಾಲಯವು ಪ್ರಕ್ರಿಯೆ ಆರಂಭಿಸಿದೆ.
 

ಕರ್ನಾಟಕದಿಂದ ಈ ಕುರಿತು ಪತ್ರ ಬಂದಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿ ವರ್ಗದ ಮೂಲಗಳು ಮಾಹಿತಿ ನೀಡಿವೆ. ‘ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೂ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಬುಧವಾರವಷ್ಟೇ ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದರು. ಇದೀಗ ಪಾಸ್‌ಪೋರ್ಟ್‌ ರದ್ದು ಪ್ರಕ್ರಿಯೆ ಪ್ರಾರಂಭವಾಗಿರುವ ಬಗ್ಗೆ ಮಾಹಿತಿ ಲಭಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ