ನಾಳೆ ಖಾಸಗಿ ಶಾಲೆಗಳ ಪ್ರತಿಭಟನೆಯ ಕಾವು
ಸರ್ಕಾರಕ್ಕೆ ಬಿಸಿಮುಟ್ಟಿಸಲು ಖಾಸಗಿ ಶಾಲೆಗಳು ಸಜ್ಜಾಗಿದೆ.ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರುಪ್ಸಾ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಕಲ್ಯಾಣ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ನಾಳೆ ಜಂಟಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರತಿಭಟನೆಗೆ ಬೆಂಬಲ ನೀಡಿದ್ದು, ನಾಳೆ ಸುಮಾರು 6 ಸಾವಿರಕ್ಕೂ ಹೆಚ್ಚು ಶಿಕ್ಷಕರು, ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.ಇನ್ನೂ ಇವರ ಬೇಡಿಕೆಗಳಾದ 1995 ರ ನಂತರ ಕನ್ನಡ ಮಾಧ್ಯಮ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸುವುದು , ಕಟ್ಟಡ ಸುರಕ್ಷಾ ವಿಚಾರದಲ್ಲಿ ಅಧಿಕಾರಿಗಳಿಂದ ಕಿರುಕುಳ ತಪ್ಪಿಸುವುದು, ನೇರವಾಗಿ ಇಲಾಖೆ ವೆಬ್ ಸೈಟ್ ಟ್ಯಾಗ್ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು ಎಂಬುದು ಸೇರಿದಂತೆ ಹಲವು ವಿಚಾರಗಳಿಗೆ ಒತ್ತಾಯಿಸಿ ನಾಳೆ ಖಾಸಗಿ ಶಾಲೆಗಳು ಧರಣಿ ನಡೆಸಲ್ಲಿದ್ದಾರೆ.