ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

ಮಂಗಳವಾರ, 14 ಮಾರ್ಚ್ 2023 (15:32 IST)
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹವನ್ನು ವಿರೋಧಿಸಿ, ಕೆಲವು ಕನ್ನಡಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದ್ರು..ಕಣಮಿಣಿಕೆ ಟೋಲ್ ಬಳಿ ಪ್ರತಿಭಟನೆ ನಡೆಸಲಾಗಿದೆ. ಟೋಲ್ ಸಂಗ್ರಹಿಸದಂತೆ ತಡೆಯಲು ಪ್ರತಿಭಟನಾಕಾರರು ಮುಂದಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕನ್ನಡಪರ ಸಂಘಟನೆಗಳಾದ ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ನವನಿರ್ಮಾಣ ವೇದಿಕೆ, ಜನ ಸೈನ್ಯ ವೇದಿಕೆ, ಕನ್ನಡಿಗರ ರಕ್ಷಣಾ ವೇದಿಕೆ, ಕರುನಾಡ ಸೇನೆ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಪ್ರತಿಭಟಿಸಿದ್ವು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ