ನಮ್ಮ ಸರ್ಕಾರದ ಹೆಮ್ಮೆಯ ಯೋಜನೆ : ಸಿದ್ದರಾಮಯ್ಯ

ಸೋಮವಾರ, 20 ಜೂನ್ 2022 (13:38 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ 2 ದಿನ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಸೋಮವಾರ ಡಾ.ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದು, ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೋದಿಗೆ ಶುಭ ಹಾರೈಸಿದ್ದಾರೆ ಹಾಗೂ ಇದು ಸರ್ಕಾರದ ಹೆಮ್ಮೆಯ ಯೋಜನೆ ಎಂದಿದ್ದಾರೆ.

ಡಾ. ಬಿಆರ್ ಅಂಬೇಡ್ಕರ್ ಅವರ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡದ ಯೋಜನೆಗೆ ತಮ್ಮ ಸರ್ಕಾರ ಬಿಡುಗಡೆ ಮಾಡಿದ್ದ ಹಣ ಹಾಗೂ ಜಾಗದ ಬಗ್ಗೆ ಪ್ರಸ್ತಾಪಿಸಿ, ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 5 ವರ್ಷಗಳ ಹಿಂದೆ(4-10-2017)ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಂಗಳೂರಿಗೆ ಬಂದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆ ಬಾಬಾಸಾಹೇಬ್ ಡಾ.ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು ಎಂದು ಮೆಲುಕು ಹಾಕಿದ್ದಾರೆ.

ವಿಶ್ವ ಕಂಡ ಅಪ್ರತಿಮ ಆರ್ಥಿಕ ತಜ್ಞ ಡಾ.ಬಿಆರ್ ಅಂಬೇಡ್ಕರ್ ಅವರ 125ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ನೆನಪಿಗೆ ಅರ್ಥಪೂರ್ಣವಾದ ಸ್ಮಾರಕರೂಪದಲ್ಲಿ ಯೋಜನೆಯೊಂದನ್ನು ರೂಪಿಸಬೇಕೆಂಬ ನಮ್ಮ ಸರ್ಕಾರದ ಕನಸು ನನಸಾಗಿ ರೂಪುಗೊಂಡದ್ದು ಬಾಬಾಸಾಹೇಬ್ ಡಾ.ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ಎಂದಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ