ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಕೆ.ಎನ್.ರಾಜಣ್ಣ

ಸೋಮವಾರ, 2 ಅಕ್ಟೋಬರ್ 2017 (15:58 IST)
ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇರ್ತೇನೆ. ಕಾಂಗ್ರೆಸ್ ಪಕ್ಷದಲ್ಲಿಯೇ ಶಾಸಕನಾಗುತ್ತೇನೆ ಎಂದು ತಿಳಿಸಿದ್ದಾರೆ.
 
ನಮ್ಮ ಸರಕಾರ ರೈತರ ಸಾಲ ಮನ್ನಾ ಮಾಡಿದೆ. ರಾಜ್ಯದ ಜನತೆಗೆ ಅನ್ನಭಾಗ್ಯದಂತಹ ಯೋಜನೆ ನೀಡಿದೆ. ಸಿಎಂ ಸಿದ್ದರಾಮಯ್ಯ ಬಡವರ, ದೀನದಲಿತರ, ಶೋಷಿತರ ಪರ ಕಾಳಜಿ ಹೊಂದಿದ್ದಾರೆ ಎಂದು ಶ್ಲಾಘಿಸಿದರು.
 
ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡುವಲ್ಲಿ ವಿಫಲವಾಗಿದೆ. ಮೋದಿ ಸರಕಾರ ಜನವಿರೋಧಿ, ರೈತ ವಿರೋಧಿ ಸರಕಾರವಾಗಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ