ಬೆಂಗಳೂರು-ಮಂಗಳೂರು ಸಂಚಾರ ಸಂಕಟಕ್ಕೆ ಒಂದೇ ಗಂಟೆಯಲ್ಲಿ ಪರಿಹಾರ ನೀಡಿದ ರೈಲ್ವೇ ಇಲಾಖೆ

Sampriya

ಶುಕ್ರವಾರ, 19 ಜುಲೈ 2024 (16:31 IST)
Photo Courtesy X
ಮಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿದು ಕರಾವಳಿಯನ್ನು ಬೆಂಗಳೂರಿನೊಂದಿಗೆ ಸಂಪರ್ಕಿಸುವ ಎರಡು ಮುಖ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಆಗಿದ್ದರಿಂದ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ನೈರುತ್ಯ ರೈಲ್ವೆ ಕ್ರಮ ಕೈಗೊಂಡಿದೆ.

ಪ್ರಯಾಣಿಕರಿಗೆ ತೊಂದರೆ ಆಗಬಾರದೆಂದು 06547 ಸಂಖ್ಯೆಯ ರೈಲು ಯಶವಂತಪುರದಿಂದ ಇಂದು (ಶುಕ್ರವಾರ) ಹೊರಡಲಿದ್ದು, 06548 ಸಂಖ್ಯೆಯ ರೈಲು ಮಂಗಳೂರು ಜಂಕ್ಷನ್‌ನಿಂದ ಶನಿವಾರ ಹೊರಡಲಿದೆ.

06549 ಸಂಖ್ಯೆಯ ರೈಲು ಇದೇ 21 ಮತ್ತು 22ರಂದು ಯಶವಂತಪುರರಿಂದ ಮಂಗಳೂರು ಜಂಕ್ಷನ್‌ಗೆ ಹೊರಡಲಿದ್ದು, 06550 ಸಂಖ್ಯೆಯ ರೈಲು 21 ಮತ್ತು 22ರಂದು ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ಹೊರಡಲಿದೆ.

ನೈರುತ್ಯ ರೈಲ್ವೆ ಮಾಹಿತಿ ಪ್ರಕಾರ, ಈ ಎಲ್ಲ ರೈಲುಗಳಲ್ಳಿ ತಲಾ ಎರಡು ಸ್ಲೀಪರ್ ಕೋಚ್‌ಗಳು ಸೇರಿದಂತೆ ಒಟ್ಟು 18 ಕೋಚ್‌ಗಳು ಇರಲಿದೆ.

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹೆಚ್ಚುವರಿ  ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.

ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು ವಿನಂತಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ