ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಬಿಡದೇ ಸುರಿಯುತ್ತಿರುವ ಮಳೆ

ಶನಿವಾರ, 9 ಅಕ್ಟೋಬರ್ 2021 (20:57 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಬಿಡದೇ ಸುರಿಯುತ್ತಿರುವ ಮಳೆಯು ಇನ್ನೂ ನಾಲ್ಕು ದಿನ ಮುಂದುವರಿಯಲಿದೆ. ಭಾನುವಾರ ಮತ್ತು ಸೋಮವಾರ 19 ಜಿಲ್ಲೆಗಳಿಗೆ ಯಲ್ಲೋ ಅಲಟ್೯ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಅ.13ರವರೆಗೂ ಮಳೆ ಮುಂದುವರೆಯಲಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಸಂಭವವಿದ್ದು, ಕರ್ನಾಟಕ ಸೇರಿ ಕೆಲವು ರಾಜ್ಯಗಳಲ್ಲಿ ಅ. 12ರವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಅಲ್ಲದೇ ಉತ್ತರ ಅಂಡಮಾನ್ ಸಮುದ್ರದಲ್ಲಿ ಅ.10ರ ವೇಳೆಗೆ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪರಿಣಾಮ ರಾಜ್ಯದ ಕೆಲವು ಭಾಗಗಳಲ್ಲಿ ಅಧಿಕ ಮಳೆಯಾಗಲಿದೆ.
ಮುಂದಿನ 4-5 ದಿನಗಳಲ್ಲಿ ಪಶ್ಚಿಮದಿಂದ ವಾಯವ್ಯ ದಿಕ್ಕಿಗೆ- ದಕ್ಷಿಣ ಒಡಿಶಾ, ಆಂಧ್ರಪ್ರದೇಶ ಉತ್ತರ ಕರಾವಳಿ ಕಡೆಗೆ ಚಂಡಮಾರುತ ಚಲಿಸುವುದರಿಂದ  ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ